ಕಾರಿನಲ್ಲಿ ಹೋಗುತ್ತಿದ್ದ ನಾಲ್ವರ ಮೇಲೆ ಒಂಟಿ ಸಲಗ ದಾಳಿ ; ಓರ್ವನ ಸ್ಥಿತಿ ಗಂಭೀರ…

139
firstsuddi

ಮೂಡಿಗೆರೆ : ಓಮ್ನಿ ಕಾರಿನಲ್ಲಿ ಹೊರನಾಡಿಗೆ ಹೋಗುತ್ತಿದ್ದ ನಾಲ್ವರ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ತಾಲ್ಲೂಕಿನ ಕಂದೂರು ಸಾರಗೋಡು-ಸಮೀಪದ ಭೈರೇಗುಡ್ಡ ಕ್ರಾಸ್ ಬಳಿ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ ಜೋಳದಾಳು ಗ್ರಾಮದ ನಾಲ್ವರು ಓಮ್ನಿಯಲ್ಲಿ ಹೊರನಾಡಿಗೆ ಹೋಗುವಾಗ ಭೈರೇಗುಡ್ಡ ಕ್ರಾಸ್ ಬಳಿ ಏಕಾಏಕಿ ಅಡ್ಡ ಬಂದ ಒಂಟಿ ಸಲಗ ದಾಳಿ ಮಾಡಿದೆ. ಕಾರಿನಲ್ಲಿದ್ದ ನಾಲ್ವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಮೂವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಒಂಟಿ ಸಲಗ ದಾಳಿ ಮಾಡುತ್ತಿದ್ದಂತೆ ಕಾರಿನಲ್ಲಿದ್ದವರು ಕಾರಿನಿಂದ ಇಳಿದು ಓಡಿ ಹೋಗಿದ್ದಾರೆ. ಓಮ್ನಿ ಬಹುತೇಕ ಜಖಂಗೊಂಡಿದ್ದು, ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.