ರೈತರನ್ನು ಮನವೊಲಿಸಬಹುದು, ಆದರೆ ರೈತರಂತೆ ನಟಿಸುವವರನ್ನು ಮನವೊಲಿಸಲು ಸಾಧ್ಯವಿಲ್ಲ : ಶೋಭಾ ಕರಂದ್ಲಾಜೆ.

168
firstsuddi

ಮೈಸೂರು : ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರಲ್ಲ. ಈ ಹೋರಾಟ ರೈತರ ಹೋರಾಟವಾಗಿ ಉಳಿದಿಲ್ಲ. ಅದು ದಲ್ಲಾಳಿಗಳ ಹೋರಾಟವಾಗಿದೆ. ರೈತರನ್ನು ಮನವೊಲಿಸಬಹುದು, ಆದರೆ ರೈತರಂತೆ ನಟಿಸುವವರನ್ನು ಮನವೊಲಿಸಲು ಸಾಧ್ಯವಿಲ್ಲ. ನೂತನ ಕಾಯ್ದೆಯಿಂದ ರೈತರಿಗೆ ಒಳ್ಳೆಯದಾಗಲಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ರೈತನ ಮಗಳೊಬ್ಬಳನ್ನು ಗುರುತಿಸಿ ಕೃಷಿ ಖಾತೆ ನೀಡಿದ್ದಾರೆ. ಹಳ್ಳಿಯಲ್ಲಿ ನಾನು ಓದುವಾಗ ವಿದ್ಯುತ್, ರಸ್ತೆ ಇರಲಿಲ್ಲ. ಅಂತಹ ಹಳ್ಳಿಯಿಂದ ಬಂದವಳಿಗೆ ಕೃಷಿ ಖಾತೆ ಕೊಟ್ಟು ಕೆಲಸ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ನಾವು ದೇಶದ ಶೇಕಡ 80ರಷ್ಟು ರೈತರ ಹಿತ ಕಾಯಬೇಕಿದೆ. ರೈತರು ಬೇರೆ ಕೆಲಸಗಳಿಗೆ ಹೋಗದೆ ಕೃಷಿಯಲ್ಲೇ ಉಳಿಯುವಂತೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ಕಾರ್ಯಯೋಜನೆ ರೂಪಿಸುತ್ತೇನೆ ಎಂದು ತಿಳಿಸಿದರು.