ನಾಡಬಂದೂಕು ಸಿಡಿಸಿ ಕೇಂದ್ರ ಸಚಿವರ ಸ್ವಾಗತ ಪ್ರಕರಣ ; ಮೂವರು ಪೊಲೀಸ್ ಕಾನ್ ಸ್ಟೇಬಲ್ ಸಸ್ಪೆಂಡ್…

101
firstsuddi

ಯಾದಗಿರಿ : ಜನಾರ್ಶೀವಾದ ಕಾರ್ಯಕ್ರಮಕ್ಕೆ ಜಿಲ್ಲೆಗೆ ಆಗಮಿಸಿದ್ದ ಕೇಂದ್ರ ಸಚಿವ ಭಗವಂತ್ ಖೂಬಾ ಸ್ವಾಗತಕ್ಕೆ ನಾಡಬಂದೂಕು ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಕಾನ್ ಸ್ಟೇಬಲ್ ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಗ್ರಾಮೀಣ ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಗಳಾದ ವಿರೇಶ್, ಸಂತೋಷ್ ಹಾಗೂ ಮೈಬೂಬ್ ಅವರನ್ನು ಅಮಾನತು ಮಾಡಲಾಗಿದೆ. 

ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರೇ ಬಂದೂಕು ವ್ಯವಸ್ಥೆ ಮಾಡಿದ್ದರು. ಆದರೆ ರಾಜಕೀಯ ನಾಯಕರನ್ನು ಬಿಟ್ಟು ಅಮಾಯಕರನ್ನು ಶಿಕ್ಷೆಗೆ ಒಳಪಡಿಸಿದ ಎಸ್ ಪಿ ವಿರುದ್ಧ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಚಿಂಚನಸೂರ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಕ್ರೋಶ ಭುಗಿಲೆದ್ದಿದೆ.

ಘಟನೆ ಹಿನ್ನಲೆ ;
 ಜನಾರ್ಶೀವಾದ ಕಾರ್ಯಕ್ರಮಕ್ಕೆ ತಾಲೂಕಿನ ಯರಗೋಳ ಗ್ರಾಮಕ್ಕೆ ಕೇಂದ್ರ ಸಚಿವ ಖೂಬಾ ಆಗಮನ ಮಾಡುತ್ತಿದ್ದಂತೆ ಜನ ನಾಡಬಂದೂಕು ಕೈಯಲ್ಲಿ ಹಿಡಿದುಕೊಂಡು ಪುಷ್ಪವನ್ನು ಅರ್ಪಿಸಿ ಭರ್ಜರಿ ಸ್ವಾಗತ ಮಾಡಿದ್ದರು. ಅವರ ಸ್ವಾಗತಕ್ಕೆ ಜನ ನಾಡಬಂದೂಕು ಸಿಡಿಸಿ ಭರ್ಜರಿಯಾಗಿ ಸ್ವಾಗತ ಮಾಡಿದ್ದು ಚರ್ಚೆಗೆ ಗ್ರಾಸವಾಗಿತ್ತು.

ಜನಾರ್ಶೀವಾದ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಜನ ಜಾತ್ರೆ ಸೇರಿತ್ತು. ಜನಾರ್ಶೀವಾದ ಕಾರ್ಯಕ್ರಮಕ್ಕೆ ಭಾಗವಹಿಸಲು ಆಗಮಿಸಿದ ಭಗವಂತ ಖೂಬಾ ಅವರನ್ನು ಮಾಜಿ ಸಚಿವ ಬಾಬೂರಾವ್ ಚಿಂಚನಸೂರು, ಶಾಸಕರಾದ ರಾಜೂಗೌಡ, ವೆಂಕಟರೆಡ್ಡಿ ಮುದ್ನಾಳ ಸ್ವಾಗತ ಮಾಡಿಕೊಂಡಿದ್ದರು.