ಕಾಬೂಲ್ : ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ಸಂಪೂರ್ಣವಾಗಿ ವಶಪಡಿಸಿಕೊಂಡ ಬಳಿಕ ಜನ ಅಲ್ಲಿಂದ ತಪ್ಪಿಸಿಕೊಳ್ಳಲು ಸಿಕ್ಕ ಸಿಕ್ಕ ವಿಮಾನ ಹತ್ತಲು ಪ್ರಾರಂಭಿಸಿದ್ದರು. ಈ ವೇಳೆ ವಿಮಾನದಿಂದ ಮೂವರು ಕೆಳಗೆ ಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿತ್ತು. ಆ ಮೂವರಲ್ಲಿ ಅಘ್ಘಾನಿಸ್ತಾನದ 19 ವರ್ಷದ ಯುವ ಫುಟ್ ಬಾಲ್ ಆಟಗಾರ ಝಾಕಿ ಅನ್ವಾರಿ ಎಂದು ಗುರುತಿಸಲಾಗಿದೆ.
ಆಗಸ್ಟ್ 16ರಂದು ಅಘ್ಘಾನಿಸ್ತಾನದ ಜನರು ವಿಮಾನ ನಿಲ್ದಾಣಗಳತ್ತ ಆಗಮಿಸಿ ವಿಮಾನಗಳನ್ನೇರಿ ದೇಶ ತೊರೆಯಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಕಾಬೂಲ್ ವಿಮಾನ ನಿಲ್ದಾಣದಲ್ಲಿದ್ದ ಸಿ-17 ಗ್ಲೋಬ್ ಮಾಸ್ಟರ್ ಸೇನಾ ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಹತ್ತಿದ್ದನು ಎಂದು ಹೇಳಲಾಗಿದೆ. ವಿಮಾನ ಟೇಕಾಫ್ ಗೊಂಡ ಕೆಲವೇ ನಿಮಿಷಗಳಲ್ಲಿ ವಿಮಾನದ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾನೆ.
ಈ ಬಗ್ಗೆ ಅಘ್ಘಾನಿಸ್ತಾನದ ರಾಷ್ಟ್ರೀಯ ಫುಟ್ಬಾಲ್ ತಂಡ ಝಾಕಿ ಅನ್ವಾರಿ ಅವರ ಸಾವಿನ ಬಗ್ಗೆ ದೃಢಪಡಿಸಿ ಸಂತಾಪ ಸೂಚಿಸಿದೆ.










