ಮೊಹರಂ ಹಬ್ಬ : ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು…

109
firstsuddi

ಧಾರವಾಡ : ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಳಮುತ್ತಲ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಾಶೀಂ ನದಾಫ(24) ಹಾಗೂ ಶರೀಫ ನದಾಫ(20) ಎಂದು ಗುರುತಿಸಲಾಗಿದೆ.

ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಸ್ನಾನ ಮುಗಿಸಿ ಮೊಹರಂ ಹಬ್ಬದ ಕೆಂಡ ಹಾಯಲು ಹೋಗಬೇಕಿದ್ದ ಈ ಯುವಕರು, ಕೆರೆಗೆ ಬಂದು ಇಜಲು ಇಳಿದಿದ್ದಾರೆ. ಈ ವೇಳೆ ಕಾಲುಜಾರಿ ಓರ್ವ ಯುವಕ ಕೆರೆಗೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಮತ್ತೋರ್ವನೂ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಸದ್ಯ ಕೆರೆಯಿಂದ ಮೃತದೇಹಗಳನ್ನು ಹೊರತೆಗೆದಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.