ವಿಚಾರಣೆಗೆ ಹಾಜರಾಗುವಂತೆ ಇಡಿ ಬುಲಾವ್ ; ದೆಹಲಿಗೆ ತೆರಳಿದ ಶಾಸಕ ಜಮೀರ್ ಅಹ್ಮದ್ ಖಾನ್!

73
firstsuddi

ಬೆಂಗಳೂರು : ಶಾಸಕ ಜಮೀರ್ ಅಹ್ಮದ್ ಖಾನ್ ಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದ ಹಿನ್ನೆಲೆ ಅವರು ದೆಹಲಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ಕೆಂಪೇಗೌಡ ಏರ್ ಪೋರ್ಟ್ ನಿಂದ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.

ದೆಹಲಿಗೆ ತೆರಳುವ ಮುನ್ನ ನಿನ್ನೆ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನ ಜಮೀರ್ ಅಹ್ಮದ್ ಖಾನ್ ಭೇಟಿಯಾಗಿ ಸಾಕಷ್ಟು ವಿಚಾರವನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಟ್ವಿಟ್ಟರ್ ನಲ್ಲಿ ಜಮೀರ್ ಅಹ್ಮದ್ ಖಾನ್ ನಿನ್ನೆ ಅಸಮಾಧಾನ ವ್ಯಕ್ತಪಡಿಸಿದ್ದು, ನಾನು ಮನೆ ಕಟ್ಟಿಸಿದ್ದೆ ದೊಡ್ಡ ಅಪರಾಧವಾ..? ಸಾಲು ಸಾಲು ಟ್ವೀಟ್ ಗಳ ಮೂಲಕ ಇಡಿ ದಾಳಿ ರಾಜಕೀಯ ಪ್ರೇರಿತ ಮತ್ತು ಮುಸ್ಲಿಂ ನಾಯಕರಿಗೆ ಕಿರುಕುಳ ನೀಡುವ ಪ್ರಯತ್ನ ಎಂದು ಗಂಭೀರ ಆರೋಪಗಳನ್ನು ಮಾಡಿದ್ದಾರೆ.