ಕಾರವಾರ : ಸೆಲ್ಫಿ ತೆಗೆಯಲು ಹೋದ ವ್ಯಕ್ತಿಯೊಬ್ಬ ಸಮುದ್ರ ಪಾಲಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕಾರ್ಣದ ಓಂ ಬೀಚ್ ನಲ್ಲಿ ನಡೆದಿದೆ.
ಸಮುದ್ರ ಪಾಲಾದ ವ್ಯಕ್ತಿಯನ್ನು ಹಾನಗಲ್ ಮೂಲದ ಶೇಕಪ್ಪ ಕಮಾಟಿ(35) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಹಾನಗಲ್ ನಿಂದ ಗೋಕರ್ಣಕ್ಕೆ 12 ಜನರು ಪ್ರವಾಸಕ್ಕೆಂದು ಆಗಮಿಸಿದ್ದರು. ಈ ವೇಳೆ ಓಂ ಬೀಚ್ ನ ಸಮುದ್ರ ತೀರದ ಕಲ್ಲುಬಂಡೆ ಬಳಿ ಸೆಲ್ಫಿ ತೆಗೆದುಕೊಳ್ಳಲು ತೆರಳಿದ್ದ ಶೇಕಪ್ಪ ಸಮುದ್ರದಲ್ಲಿ ಕೊಚ್ಚಿಹೋಗಿದ್ದಾನೆ. ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದು , ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










