ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 25,072 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,24,49,306ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 389 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,34,756ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,24,49,306 ಮಂದಿ ಸೋಂಕಿತರ ಪೈಕಿ ಈವರೆಗೆ 3,16,80,626 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










