ಅಂತಾರಾಜ್ಯ ಜಲ ವಿವಾದ ಸಂಬಂಧ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಭೆ : ಬಸವರಾಜ್ ಬೊಮ್ಮಾಯಿ.

78
firstsuddi

ಬೆಂಗಳೂರು : ಅಂತಾರಾಜ್ಯ ಜಲ ವಿವಾದಗಳ ಕುರಿತು ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಭೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು. ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಾವರಿಗೆ ಸಂಬಂಧಿಸಿ ಅಂತಾರಾಜ್ಯ ಜಲ ವಿವಾದಗಳ ಕುರಿತು ಕಾನೂನು ತಜ್ಞರ ಜತೆ ದೆಹಲಿಯಲ್ಲಿ ಸಭೆ ಮಾಡುತ್ತೇನೆ. ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ನೀರಾವರಿ ವಿವಾದದ ಬಗ್ಗೆ ರಾಜ್ಯದ ಮುಂದಿನ ನಡೆಯ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಲಾಗುವುದು. ಆಗಸ್ಟ್ 25ರ ಸಂಜೆ ದೆಹಲಿಗೆ ಹೋಗಿ 26ರಂದು ಎಲ್ಲ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗುವುದು ಎಂದರು.

ಕೋವಿಡ್ ಮೂರನೇ ಅಲೆ ಅಕ್ಟೋಬರ್ ನಲ್ಲಿ ಬರುತ್ತದೆ ಅಂತ ತಜ್ಞರು ಹೇಳಿದ್ದಾರೆ. ಹಾಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಭೆ ನಡೆಸಲಿದ್ದೇವೆ. ಆಗಸ್ಟ್ 30 ರಂದು ಸಭೆ ನಡೆಸುತ್ತೇವೆ. ಕೋವಿಡ್ ಮೂರನೇ ಅಲೆಯ ನಿಯಂತ್ರಣದ ಬಗ್ಗೆ ಕೋವಿಡ್ ತಜ್ಞರ ಸಮಿತಿ ಹಾಗೂ ಸಂಬಂಧ ಪಟ್ಟ ಸಚಿವರೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.