ತುಮಕೂರು : ದನ ಮೇಯಿಸಲು ಹೋಗಿದ್ದ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಛೋಟಾ ಸಾಬರಪಾಳ್ಯ ಗ್ರಾಮದ ಬಳಿ ನಡೆದಿದೆ. ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಜಯಲಕ್ಷ್ಮೀ(35) ಕೊಲೆಯಾದ ಮಹಿಳೆ. ನಿನ್ನೆ ಬೆಳಿಗ್ಗೆ ದನ ಮೇಯಿಸಲು ಗ್ರಾಮದ ಬೆಟ್ಟದ ಬಳಿ ಹೋಗಿದ್ದರು. ಈ ವೇಳೆ ಮಹಿಳೆ ಮೇಲೆ ಎರಗಿದ ಕಿರಾತಕರು ಮಹಿಳೆ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿದ್ದಾರೆ. ಸಂಜೆ 6.45 ಆದರೂ ಪತ್ನಿ ಮನೆಗೆ ಬರದಿದ್ದರಿಂದ ಗಂಡ ಶಿವಕುಮಾರ್ ಪತ್ನಿಯನ್ನು ಹುಡುಕಿಕೊಂಡು ಬೆಟ್ಟದ ಬಳಿ ಹೋದಾಗ ಘಟನೆ ಬೆಳಕಿಗೆ ಬಂದಿದೆ.
ಇಂದು ಎಫ್ ಎಸ್ ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










