ಒಂದೇ ಕುಟುಂಬದ ನಾಲ್ವರು ಕಾರು ಸಮೇತ ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನ!

117
firstsuddi

ಚಿಕ್ಕಮಗಳೂರು : ವಾಯ್ಸ್ ಮೆಸೇಜ್‌ ಮಾಡಿ  ಒಂದೇ ಕುಟುಂಬದ ನಾಲ್ವರು ಕಾರು ಸಮೇತ ಭದ್ರಾ ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ. ಹಳ್ಳಿ ಬಳಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹಳೇಜೇಡಿಕಟ್ಟೆ ಗ್ರಾಮದವರು ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಸ್ವಿಫ್ಟ್ ಕಾರಿನಲ್ಲಿ ಬಂದ ಮಂಜು, ನೀತು, ಧ್ಯಾನ್ ಹಾಗೂ ಮಂಜು ತಾಯಿ ಸುನಂದಮ್ಮ ಕಾರಿನ ಸಮೇತ ಭದ್ರಾ ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ನೀತು ಹಾಗೂ ಮಗು ಧ್ಯಾನ್ ಸಾವಿನಿಂದ ಪಾರಾಗಿದ್ದು, ಆದರೆ ಮಂಜು ಹಾಗೂ ಮಂಜು ತಾಯಿ ಸುನಂದಮ್ಮ ಪತ್ತೆಯಾಗಿಲ್ಲ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ಅಕ್ಷಯ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.