ಮಾಜಿ ಸಚಿವರ ರಕ್ಷಣೆ ನಿಂತಂತೆ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಮಾಡುವಂತಿದೆ ಸರ್ಕಾರ : ಕಾಂಗ್ರೆಸ್.

79
firstsuddi

ಬೆಂಗಳೂರು : ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆ ನಿಂತಂತೆ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಮಾಡುವಂತಿದೆ ಸರ್ಕಾರ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಸಾಂಸ್ಕೃತಿಕ ನಗರಿ ಎನಿಸಿಕೊಂಡ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ಅತ್ಯಾಚಾರ ಪ್ರಕರಣವು ಕರ್ನಾಟಕ ಬಿಜೆಪಿ ಸರ್ಕಾರದ ಕಳಪೆ ಕಾನೂನು ಸುವ್ಯವಸ್ಥೆಗೆ ಕನ್ನಡಿ. ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿದ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ! ಸಿದ್ದು ಸವದಿಯನ್ನು ರಕ್ಷಿಸಿದ ಮಹಿಳಾ ವಿರೋಧಿ ಬಿಜೆಪಿಯಿಂದ ಮಹಿಳೆಯರು ರಕ್ಷಣೆ ಬಯಸುವುದು ವ್ಯರ್ಥ. ಮೈಸೂರಿನಂತಹ ನಗರದಲ್ಲಿ ಅತ್ಯಾಚಾರ ಪ್ರಕರಣ ನಡೆದು 24 ಗಂಟೆಗೂ ಅಧಿಕ ಸಮಯ ಕಳೆದಿದ್ದರೂ ಆರೋಪಿಗಳನ್ನು ಬಂಧಿಸಲಾಗದ್ದು ಆಡಳಿತದಲ್ಲಿ ಗೃಹ ಇಲಾಖೆಯ ಕಾರ್ಯಕ್ಷಮತೆ ಕುಸಿದಿರುವುದಕ್ಕೆ ಸಾಕ್ಷಿ. ಇದುವರೆಗೂ ಗೃಹಸಚಿವರು, ಬಿಜೆಪಿಯ ಮಹಿಳಾ ನಾಯಕಿಯರು ಸಂತ್ರಸ್ತೆಯನ್ನು ಭೇಟಿಯಾಗದಿರುವುದು ಬಿಜೆಪಿಯ ನಿರ್ಲಕ್ಷ್ಯ ಧೋರಣೆಗೆ ನಿದರ್ಶನ. ಹಿಂದೊಮ್ಮೆ ಮಾಧ್ಯಮ ವರದಿಗಾರ್ತಿಗೆ ಈಶ್ವರಪ್ಪ ಅವರು ಆಡಿದ ಅಸಂಬದ್ಧ ಮಾತುಗಳೇ ಬಿಜೆಪಿಯ ಮಹಿಳಾ ವಿರೋಧಿ ಧೋರಣೆ ಹಾಗೂ ಮಹಿಳಾ ರಕ್ಷಣೆಯ ಬಗೆಗೆ ಇರುವ ಉದಾಸೀನತೆ ತೋರುತ್ತದೆ. ಚಾಮುಂಡಿ ಬೆಟ್ಟದಂತಹ ಪ್ರವಾಸಿತಾಣದಲ್ಲೂ ಪೊಲೀಸ್ ರಕ್ಷಣೆ, ಗಸ್ತು ಇಲ್ಲದಿರುವುದು ಸರ್ಕಾರದ ವೈಫಲ್ಯ ಗೃಹಸಚಿವರೇ ಎಂದು ಟ್ವೀಟ್ ಮಾಡಿದೆ.