ಮೊಬೈಲ್ ವಿಷಯಕ್ಕೆ ಜಗಳ – ಇಬ್ಬರು ಹೆಣ್ಣುಮಕ್ಕಳನ್ನು ಬಾವಿಗೆ ತಳ್ಳಿ, ತಾಯಿ ನೇಣಿಗೆ ಶರಣು!

64
firstsuddi

ಭೋಪಾಲ್ : ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬಾವಿಗೆ ತಳ್ಳಿ, ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚತರ್ಪುರದ ಹಳ್ಳಿಯೊಂದರಲ್ಲಿ ನಡೆದಿದೆ. ಮಹಿಳೆ ತನ್ನ 10 ವರ್ಷ ಮತ್ತು 4 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಬಾವಿಗೆ ಹಾಕಿ, ನಂತರ ತಾನು ನೇಣು ಬಿಗಿದುಕೊಂಡಿದ್ದಾಳೆ. ಅದೃಷ್ಟವಶಾತ್ ಆ ಇಬ್ಬರು ಹೆಣ್ಣುಮಕ್ಕಳು ಬಾವಿಯ ಕಲ್ಲಿನ ಸಂದಿಯಲ್ಲಿ ಸಿಕ್ಕಿಹಾಕಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತಳ ಅತ್ತೆ ಆಕೆಯ ಮೊಬೈಲ್ ಫೋನನ್ನು ಕಿತ್ತುಕೊಂಡಿದ್ದರು. ಇದರಿಂದ ಕೋಪಗೊಂಡಿದ್ದ ಆಕೆ ಅತ್ತೆಯೊಂದಿಗೆ ಜಗಳವಾಡಿದ್ದಳು. ಇದೇ ವಿಷಯ ದೊಡ್ಡದಾಗಿ ಕೋಪಗೊಂಡ ಆಕೆ ಮರುದಿನ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ತೋಟದ ಮನೆಗೆ ಹೋಗಿದ್ದಾಳೆ. ಅಲ್ಲಿ ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ಮನೆಗೆ ಬಂದು ನೇಣು ಹಾಕಿಕೊಂಡಿದ್ದಾಳೆ ಎಂದು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.