ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 45,352 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,29,03,289ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 366 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,39,895ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,29,03,289 ಮಂದಿ ಸೋಂಕಿತರ ಪೈಕಿ ಈವರೆಗೆ 3,20,63,616 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










