ಮಹಾನಗರ ಪಾಲಿಕೆ ಸಮರ : ಬೆಳಗಾವಿ, ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಮೇಲುಗೈ, ಕಲಬುರಗಿಯಲ್ಲಿ ಕಾಂಗ್ರೆಸ್ ಗೆ ಮುನ್ನಡೆ…

82
firstsuddi

ಬೆಳಗಾವಿ : ತೀವ್ರ ಕುತೂಹಲ ಮೂಡಿಸಿದ್ದ ಪಾಲಿಕೆ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ಪಾಲಿಕೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ಬಿಜೆಪಿ ಒಟ್ಟು 30 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಕಾಂಗ್ರೆಸ್ ಗೆ  7, ಪಕ್ಷೇತರ 5, ಎಂಇಎಸ್ 2, ಎಂಐಎಂ 1 ಸ್ಥಾನದಲ್ಲಿ ಗೆಲುವು ಸಾಧಿಸಿವೆ.

ವಾರ್ಡ್ 57 ರಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಸೋಮನಾಚೆ, ವಾರ್ಡ್ 8 ರಲ್ಲಿ ಬಿಜೆಪಿ ಅಭ್ಯರ್ಥಿ ಜ್ಯೋತಿಬಾ ನಾಯಿಕ್. ವಾರ್ಡ್ 42 ರಲ್ಲಿ ಬಿಜೆಪಿ ಅಭ್ಯರ್ಥಿ ಅಭಿಜಿತ್ ಜವಳೇಕರ್, ವಾರ್ಡ್ 49 ರಲ್ಲಿ ಬಿಜೆಪಿ ಅಭ್ಯರ್ಥಿ ದೀಪಾಲಿ ಟೋಪಗಿ, ವಾರ್ಡ್ 24 ರಲ್ಲಿ ಬಿಜೆಪಿ ಅಭ್ಯರ್ಥಿ ಗಿರೀಶ್ ದೊಂಗಡಿ, ವಾರ್ಡ್ 32ರಲ್ಲಿ ಬಿಜೆಪಿ ಅಭ್ಯರ್ಥಿ ಸಂದೀಪ್ ಗೆಲುವು ಸಾಧಿಸಿದ್ದಾರೆ. ಇತ್ತ ನಾಡದ್ರೋಹಿ ಎಂಇಎಸ್ ಗೆ ಭಾರೀ ಮುಖಭಂಗವಾಗಿದೆ.

ಹುಬ್ಬಳ್ಳಿ-ಧಾರವಾಡ : ಇತ್ತ ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದು, 35 ವಾಡ್೯ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದು, ಕಾಂಗ್ರೆಸ್ ನ 21 ಅಭ್ಯರ್ಥಿಗಳು, ಪಕ್ಷೇತರರಾದ 05 ಮಂದಿ ಗೆಲುವಿನ ನಗೆ ಬೀರಿದ್ದಾರೆ.
ಹುಬ್ಬಳ್ಳಿ ಧಾರವಾಡದಲ್ಲಿ ಕಾಂಗ್ರೆಸ್ ಪಕ್ಷ ಭಾರೀ ಮುಖಭಂಗ ಅನುಭವಿಸಿದೆ. ಕೈ ಅಭ್ಯರ್ಥಿ ಮೊಹಮ್ಮದ್ ಅಳ್ಳೂರುಗೆ ಹೀನಾಯ ಸೋಲು ಎದುರಾಗಿದ್ದು, ಎಐಎಂಐಎಂ ಅಭ್ಯರ್ಥಿ ನಜೀರ್ 2800 ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದಾರೆ.

ಕಲಬುರಗಿ : ಬಿಜೆಪಿಯು ಮೂರು ವಾರ್ಡ್ ಗಳಲ್ಲಿ ಜಯಭೇರಿ ಬಾರಿಸಿದೆ. ವಾರ್ಡ್ ನಂಬರ್ 6 , 9, 51 ರಲ್ಲಿ ಗೆಲುವು ಸಾಧಿಸಿದ ಬಿಜೆಪಿ. ಕಾಂಗ್ರೆಸ್, ಆರು ವಾರ್ಡ್ ಗಳಲ್ಲಿ ಗೆಲುವಿನ ನಗೆ ಬೀರಿದ್ದು, ಪಕ್ಷೇತರ ಒಂದು, ಜೆಡಿಎಸ್ ಒಂದು ವಾರ್ಡ್ ನಲ್ಲಿ ಗೆದ್ದಿದೆ.