ಬೆಂಗಳೂರು : ಶಾಲೆಯ ಆವರಣದಲ್ಲಿರುವ ಮರಗಳನ್ನು ಕಡಿಯದಂತೆ ಆಗ್ರಹಿಸಿ ನಗರದ ಪೀಣ್ಯ ದಾಸರಹಳ್ಳಿಯ ಅಬ್ಬಿಗೆರೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಅಪ್ಪಿಕೋ ಚಳುವಳಿ ರೀತಿಯಲ್ಲಿ ಪ್ರತಿಭಟನೆ ನೆಡೆಸಿದ್ದಾರೆ. ರಸ್ತೆ ವಿಸ್ತರಣೆ ಮಾಡುವ ಸಲುವಾಗಿ ಬಿಬಿಎಂಪಿ, ಏಕಾಏಕಿ ಮರಗಳನ್ನು ಕಡಿಯಲು ಮುಂದಾಗಿದ್ದು, ಈ ಹಿನ್ನೆಲೆ ಶಾಲಾ ಮಕ್ಕಳು ಕೈಯಲ್ಲಿ ನಾಮಫಲಕಗಳನ್ನು ಹಿಡಿದು, ಮರಗಳನ್ನು ಸುತ್ತುವರಿದು, ಕಡಿಯದಂತೆ ಮನವಿ ಮಾಡಿದ್ದಾರೆ.
ಅಬ್ಬಿಗೆರೆ ಸರ್ಕಾರಿ ಶಾಲಾ ಆವರಣದಲ್ಲಿ 100ಕ್ಕೂ ಹೆಚ್ಚು ಮರಗಳಿದ್ದು, ಅಬ್ಬಿಗೆರೆಯಿಂದ ಚಿಕ್ಕಬಾಣಾವರಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯನ್ನು ಅಗಲೀಕರಣ ಮಾಡಲು ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ. ಈ ಅಗಲೀಕರಣ ಅವೈಜ್ಞಾನಿಕವಾಗಿದ್ದು, ಯಾವುದೇ ಕಾರಣಕ್ಕೂ ಮುಂದುವರೆಸದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ.










