ಬೈಕ್ ಗೆ ಬೊಲೆರೋ ಡಿಕ್ಕಿ ; ಮೂವರು ಯುವಕರು ಸಾವು…

74
firstsuddi

ದಾವಣಗೆರೆ : ಬೈಕ್ ಗೆ ಬೊಲೆರೋ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಭಾಗಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಚನ್ನಗಿರಿ ತಾಲ್ಲೂಕು ಮಲ್ಲೇಶಪುರ ಗ್ರಾಮದ ನಿವಾಸಿಗಳಾದ ಅಜ್ಜಯ್ಯ (18) ಮಂಜುನಾಥ್ (17) ಹಾಗೂ ದೇವರಾಜ್ (17) ಎಂದು ಗುರುತಿಸಲಾಗಿದೆ.

ಈ ಮೂವರು ಯುವಕರು ಗಣಪತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು ಚನ್ನಗಿರಿಗೆ ತೆರಳುತ್ತಿದ್ದರು. ಈ ವೇಳೆ ಬೈಕ್ ಗೆ ಬೊಲೆರೋ ಡಿಕ್ಕಿಯಾಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಮತ್ತೋರ್ವ ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.

ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.