ಸಿರುಗುಪ್ಪ ಬಳಿ ಕಾರು ಅಪಘಾತ – ವಿವಾಹ ನಿಶ್ಚಯವಾಗಿದ್ದ ಜೋಡಿ ಸಾವು…

86
firstsuddi

ಬಳ್ಳಾರಿ : ಮಂತ್ರಾಲಯಕ್ಕೆ ಹೋಗಿ ವಾಪಸ್ ಬರುವಾಗ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಬಳಿ ಸೇತುವೆಯ ತಡೆಗೋಡೆಗೆ ಕಾರು ಡಿಕ್ಕಿಯಾಗಿದ್ದು, ವಿವಾಹ ನಿಶ್ಚಯವಾಗಿದ್ದ ಜೋಡಿ ಸಾವನ್ನಪ್ಪಿದ್ದಾರೆ.

ವಿನಯ್(30) ಮತ್ತು ಸೌಜನ್ಯ(24) ಅಪಘಾತದಲ್ಲಿ ದಾರುಣವಾಗಿ ಸಾವಿಗೀಡಾದ ಭಾವಿ ದಂಪತಿ. ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮುಗಿಸಿಕೊಂಡಿದ್ದರು. ವಿನಯ್ ಕಾರಿನಲ್ಲಿ ಮಂತ್ರಾಲಯಕ್ಕೆ ಹೋಗಿ ವಾಪಸ್ ಬರುವಾಗ ಸೇತುವೆಯ ತಡೆಗೋಡೆಗೆ ಕಾರು ಡಿಕ್ಕಿಯಾಗಿ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರು ಚಾಲನೆ ಮಾಡುತ್ತಿದ್ದ ವಿನಯ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೌಜನ್ಯಳನ್ನು ಸಿರುಗುಪ್ಪ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಕಾರನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿರುವುದು ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದ್ದು, ಸಿರುಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.