ಮುಂಬೈ : ಟೆಂಪೋದಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ ಸಂತ್ರಸ್ತ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮುಂಬೈನ ಸಾಕಿನಾಕಾ ಪ್ರದೇಶದ ಕೈರಾನಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟೆಂಪೋದಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಚಿತ್ರ ಹಿಂಸೆ ನೀಡಿ, ಬಳಿಕ ಆಕೆಯನ್ನು ಅತ್ಯಾಚಾರ ಎಸಗಿದ್ದ. ಕೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿದ್ದಾನೆ ಎಂದು ಪೊಲೀಸರಿಗೆ ಫೋನ್ ಕರೆ ಬಂದಿದ್ದು, ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸುವಷ್ಟರಲ್ಲಿ ಕೃತ್ಯ ನಡೆದಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಪೊಲೀಸರು ರಾಜವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇದೀಗ 33 ಗಂಟೆಗಳ ನರಳಾಟದ ಬಳಿಕ ಸಂತ್ರಸ್ತೆ ಕೊನೆಯುಸಿರೆಳೆದಿದ್ದಾರೆ.










