ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ…

74
firstsuddi

ಚಿಕ್ಕಬಳ್ಳಾಪುರ : ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಗಜಾನನ ಚೌಕದ ಜನನಿಬಿಡ ಪ್ರದೇಶದಲ್ಲಿ ನಡೆದಿದೆ. ಟಿಪ್ಪು ನಗರದ ಮುಸ್ತಾಕ್(35) ನನ್ನು ನವೀದ್ ಎಂಬಾತ ಹತ್ಯೆಗೈದಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ನವೀದ್ ಮುಸ್ತಾಕ್ ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್, ಡಿವೈಎಸ್ ಪಿ ಲಕ್ಷ್ಮಯ್ಯ ಭೇಟಿ ನೀಡಿದ್ದು, ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.