ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಬಿಗ್‍ಬಾಸ್ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ಅವರು ನಗರದ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ರಾಜಕೀಯ ನಾಯಕರು, ಸಿನಿಮಾ ನಟ-ನಟಿಯರ ವಿರುದ್ಧ ಸಾಕ್ಷ್ಯಗಳು ಇಲ್ಲದೆ ಪ್ರಶಾಂತ್ ಸಂಬರಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯ ಕ್ರಮವನ್ನು ಕೈಗೊಳ್ಳುವಂತೆ ಚಕ್ರವರ್ತಿ ಚಂದ್ರಚೂಡ್ ಅವರು ಕೋರಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಕೇಸ್ ಗೆ ಸಂಬಂಧಿಸಿ ಪ್ರಶಾಂತ್ ಸಂಬರಗಿ ಸಾಕಷ್ಟು ರೀತಿಯ ಆರೋಪ ಮಾಡಿದ್ದಾರೆ. ಆದರೆ ಈವರೆಗೂ ಮಾಧ್ಯಮದ ಮುಂದೆ ಹೇಳಿದ ಹೇಳಿಕೆಗೆ ದಾಖಲೆಗಳುನ್ನ ಕೊಟ್ಟಿಲ್ಲ. ನಿರೂಪಕಿ ಅನುಶ್ರೀ ವಿರುದ್ಧ ಕೋಟ್ಯಂತರ ರೂಪಾಯಿ ಮನೆ ಕಟ್ಟಿದ್ದಾರೆ ಅಂತಾ ಹೇಳಿದ್ದಾರೆ. ಅದರ ಕುರಿತಾಗಿಯೂ ದಾಖಲೆಗಳನ್ನ ಕೊಟ್ಟಿಲ್ಲ. ಶುಗರ್ ಡ್ಯಾಡಿ ಬಗ್ಗೆಯೂ ದಾಖಲೆಗಳನ್ನು ಯಾವೊಬ್ಬ ಅಧಿಕಾರಿಗಳಿಗೂ ನೀಡಿಲ್ಲ. ಬೆದರಿಕೆ ಹಾಕುತ್ತ ಸಂಬರಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ಈ ಕಾರಣಕ್ಕೆ ಕೂಡಲೇ ಅವರ ಮೇಲೆ ಕ್ರಮಕೈಗೊಳ್ಳುವಂತೆ ಚಂದ್ರಚೂಡ್ ದೂರು ನೀಡಿದ್ದಾರೆ.










