ಧಾರವಾಡ : ಆಸ್ಪತ್ರೆಯಲ್ಲೇ ಶುಶ್ರೂಷಕಿ ಆತ್ಮಹತ್ಯೆಗೆ ಯತ್ನ…

77
firstsuddi

ಧಾರವಾಡ : ಸರ್ಕಾರಿ ಆಸ್ಪತ್ರೆಯಲ್ಲೇ ಶುಶ್ರೂಷಕಿಯೊಬ್ಬರು ಆತ್ನಹತ್ಯೆಗೆ ಯತ್ನಿಸಿದ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮದ ಆಸ್ಪತ್ರೆಯಲ್ಲಿ ಹಿರಿಯ ಆರೋಗ್ಯ ಶುಶ್ರೂಷಕಿ ಆಗಿ ಕೆಲಸ ಮಾಡುತ್ತಿದ್ದ ಕಮಲಾ ನಾಗೇಶ್ವರರಾವ್ ಆತ್ಮಹತ್ಯೆಗೆ ಯತ್ನಿಸಿದ ಶುಶ್ರೂಷಕಿ. ಕಮಲಾ, ಆಸ್ಪತ್ರೆ ಕೊಠಡಿಯಲ್ಲೇ ನೇಣು ಬಿಗಿದುಕೊಳ್ಳಲು ಯತ್ನಿಸಿದ್ರು. ಈ ವೇಳೆ ಪಕ್ಕದಲ್ಲೇ ಇದ್ದ ಇತರೆ ಸಿಬ್ಬಂದಿಗಳು ಕಮಲಾರನ್ನು ರಕ್ಷಣೆ ಮಾಡಿದ್ದಾರೆ.

ಆತ್ಮಹತ್ಯೆಗೆ ಮೇಲಾಧಿಕಾರಿಗಳ ಕಿರುಕುಳವೇ ಕಾರಣ ಎಂದು ಶುಶ್ರುಕಿ ಕಮಲಾ ಆರೋಪಿಸಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.