ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರು 71ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
71ನೇ ಹುಟ್ಟುಹಬ್ಬದ ಶುಭಾಶಯಗಳು. ನರೇಂದ್ರ ಮೋದಿಯವರಿಗೆ ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ನಾನು ಸರ್ವಶಕ್ತ ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ನಾಯಕತ್ವದಲ್ಲಿ ಮಹಾನ್ ರಾಷ್ಟ್ರವು ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಮಾಜಿ ದೇವೇಗೌಡರು ಟ್ವೀಟ್ ಮಾಡಿದ್ದಾರೆ.
I wish Shri @narendramodi a very happy 71st birthday. I pray to almighty God to bless him with good health. May his leadership of our great nation bring peace and prosperity to all its citizens.
— H D Devegowda (@H_D_Devegowda) September 17, 2021
ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭಾಶಯಗಳು. ರಾಷ್ಟ್ರದ ಸೇವೆ ಮಾಡಲು ಅವರಿಗೆ ಹೆಚ್ಚಿನ ಶಕ್ತಿ, ಸ್ಫೂರ್ತಿ ಮತ್ತು ಆರೋಗ್ಯವನ್ನು ಕರುಣಿಸಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.
I extend my warm greetings on the occasion of the birthday of our Prime Minister @narendramodi.
I pray to God to bless him with more energy, inspiration and health to continue with service to the nation pic.twitter.com/K0LSE6jsY8— H D Kumaraswamy (@hd_kumaraswamy) September 16, 2021










