ಗಣೇಶ ವಿಸರ್ಜನೆ ವೇಳೆ ವ್ಯಕ್ತಿಗೆ ಚಾಕು ಇರಿತ!

80
firstsuddi

ಚಿಕ್ಕೋಡಿ(ಬೆಳಗಾವಿ) : ಗಣೇಶ ವಿಸರ್ಜನೆ ವೇಳೆ ವ್ಯಕ್ತಿಯೋರ್ವನಿಗೆ ಅಪರಿಚಿತರು ಚಾಕುವಿನಿಂದ ಇರಿದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕುರ್ಲಿ ಗ್ರಾಮದ ನಿವಾಸಿ ವಿಶಾಲ ವಿಷ್ಣು ಶಿವಡೆ ಹಲ್ಲೆಗೊಳಗಾದ ವ್ಯಕ್ತಿ. ವಿಶಾಲ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಚಾಕು ಇರಿದು ಪರಾರಿಯಾಗಿದ್ದಾನೆ. ಘಟನೆಯಿಂದ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಣೇಶ್ ವಿಸರ್ಜನೆ ವೇಳೆ ಡಾಲ್ಬಿ ಡಿಜೆ ಬಳಕೆ ಮಾಡಲಾಗಿತ್ತು. ಡಾಲ್ಬಿ ಡಿಜೆ ನೋಡಲು ಸದಲಗಾ ಪಟ್ಟಣಕ್ಕೆ ವಿಶಾಲ್ ಆಗಮಿಸಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಡಿಜೆ ಬಳಸದಂತೆ ಸರ್ಕಾರದ ಆದೇಶವಿದ್ದರೂ ಡಿಜೆ ಬಳಕೆಗೆ ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.