ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 31,923 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,35,63,421ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 282 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,46,050ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,35,63,421 ಮಂದಿ ಸೋಂಕಿತರ ಪೈಕಿ ಈವರೆಗೆ 3,28,15,731 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










