ಬೆಂಗಳೂರು ಸ್ಫೋಟ : ಮೃತರ ಕುಟುಂಬಕ್ಕೆ ತಲಾ 2ಲಕ್ಷ ರೂ. ಪರಿಹಾರ ಘೋಷಿಸಿದ ಜಮೀರ್ ಅಹ್ಮದ್.

70
firstsuddi

ಬೆಂಗಳೂರು : ನಗರದ ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮನೋಹರ್ ಮತ್ತು ಗುಡ್ಡದಹಳ್ಳಿ ಪಂಕ್ಚರ್ ಮಾಲೀಕ ಅಸ್ಲಾಂ ಪಾಷ ಸಾವನ್ನಪ್ಪಿದ್ದು, ಘಟನೆಯಲ್ಲಿ ಐವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಾಸಕ ಜಮೀರ್ ಅಹಮದ್ ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಪಾಲಿಕೆಯಿಂದ ಅನುಮತಿ ಪಡೆದೇ ಪಟಾಕಿ ಸ್ಟೋರೇಜ್ ಮಾಡಲಾಗಿದೆ. ಈ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ. ಸ್ಥಳೀಯರೇ ಮೃತಪಟ್ಟಿದ್ದಾರೆ. ಕೆಲ ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಟಾಕಿ ಹಾಗೂ ಸಂಬಂಧಿಸಿದ ವಸ್ತುಗಳನ್ನು ಗೋಡೌನ್ ನಲ್ಲಿಟ್ಟುಕೊಂಡು, ಬೇರೆಡೆಗೆ ಸಾಗಾಟ ಮಾಡುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ಸರ್ಕಾರದಿಂದ ಬಡವರಿಗೆ ಪರಿಹಾರ ನೀಡಬೇಕು. ಮೃತರ ಕುಟುಂಬಕ್ಕೆ ನಾನೂ ವೈಯಕ್ತಿಕವಾಗಿ 2 ಲಕ್ಷ ರೂ.ಗಳ ಪರಿಹಾರ ನೀಡುತ್ತೇನೆ. ವೈದ್ಯಕೀಯ ಖರ್ಚನ್ನು ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.