ಭಾರತದ ಲಸಿಕಾಕರಣ ವಿಶ್ವಕ್ಕೆ ಮಾದರಿಯಾಗಿದೆ : ಮೆಚ್ಚುಗೆ ವ್ಯಕ್ತಪಡಿಸಿದ ಕಮಲಾ ಹ್ಯಾರಿಸ್.

81
firstsuddi

ವಾಷಿಂಗ್ಟನ್ : ಭಾರತದ ಲಸಿಕಾಕರಣ ವಿಶ್ವಕ್ಕೆ ಮಾದರಿಯಾಗಿದೆ ಎಂದು ಕಮಲಾ ಹ್ಯಾರಿಸ್ ಮೆಚ್ಚುಗೆ ವ್ಯಕ್ತಪಡಿದ್ದಾರೆ.

4 ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನಿನ್ನೆ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭೇಟಿಯಾಗಿದ್ದರು. ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಕಮಲಾ ಹ್ಯಾರಿಸ್ ಅವರು ಭಾರತವನ್ನು ಹೊಗಳಿದ್ದಾರೆ. ಅದರಲ್ಲೂ ಭಾರತದ ಲಸಿಕಾಕರಣಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿತ್ಯ 1 ಕೋಟಿ ಲಸಿಕೆ ನೀಡೋದು ದೊಡ್ಡ ಸಾಧನೆ. ಕೊರೊನಾ ವಿರುದ್ಧ ನಾವು ಒಟ್ಟಾಗಿ ಹೋರಾಡುತ್ತೇವೆ. ಭಾರತದೊಂದಿಗಿನ ಬಾಂಧವ್ಯ ಇನ್ನಷ್ಟು ಗಟ್ಟಿಗೊಳಿಸಲು ನಮ್ಮ ಬೆಂಬಲ ಸದಾ ಇರುತ್ತದೆ ಎಂದು ಭರವಸೆ ನೀಡಿದರು. ಇದೇ ವೇಳೆ ಭಾರತಕ್ಕೆ ಆಗಮಿಸುವಂತೆ ಕಮಲಾ ಹ್ಯಾರಿಸ್ ಗೆ ಮೋದಿ ಆಮಂತ್ರಣ ನೀಡಿದರು.

ಈ ಮೊದಲು ಮೋದಿ ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕದ ಉನ್ನತ ತಂತ್ರಜ್ಞಾನ ಕಂಪನಿಗಳ ಸಿಇಒಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇಂದು ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷ ಜೋ ಬೈಡ್ ಜೊತೆ ಇಂದು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಬಳಿಕ ಅಮೆರಿಕ, ಭಾರತ, ಜಪಾನ್, ಆಸ್ಟ್ರೇಲಿಯಾ ಮತ್ತು ದಕ್ಷಿಣಾಫ್ರಿಕಾಗಳನ್ನು ಒಳಗೊಂಡ ಕ್ವಾಡ್ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.