ನಿಖಿಲ್-ರೇವತಿ ದಂಪತಿಗೆ ಗಂಡು ಮಗು…

75
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಇಂದು ಗಂಡು ಮಗು ಜನಿಸಿದ್ದು, ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನೀಡಿದ್ದು, ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ತಾತ ಆಗಿರುವ ಸಂತೋಷದ ವಿಚಾರವನ್ನು ಹೆಚ್ ಡಿಕೆ ಟ್ವೀಟ್ ಮೂಲಕ ತಿಳಿಸಿದ್ದಾರೆ.