ಧಾರವಾಡ : ಎಗ್ ರೈಸ್ ಆಸೆ ತೋರಿಸಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯಲ್ಲಿ ಭಿಕ್ಷೆ ಬೇಡುತ್ತಿದ್ದ 14 ವರ್ಷದ ಬಾಲಕಿಗೆ ಎಗ್ ರೈಸ್ ತಿನ್ನುಸುವ ಆಸೆ ತೋರಿಸ ಆರೋಪಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ. ಮಕ್ಕಳ ರಕ್ಷಣಾ ಘಟಕದ ಸಿಂಬ್ಬಂದಿ ಬಾಲಕಿಯನ್ನ ವಿಚಾರಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.
ಅಲ್ಲದೇ ವಿಚಾರಣೆ ವೇಳೆ ಬಾಲಕಿ, ಆರೋಪಿಯನ್ನು ತೊರಿಸಿದರೆ ಗುರುತು ಹಿಡಿಯುವುದಾಗಿ ತಿಳಿಸಿದ್ದಳು. ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಕಮಲಾ ಉಪನಗರ ಠಾಣೆಯಲ್ಲಿ ದೂರನ್ನ ನೀಡಿದ್ದರು. ದೂರು ಆಧಾರದ ಮೇಲೆ ಉಪನಗರ ಠಾಣೆ ಪೊಲೀಸರು, ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ಶರಣಪ್ಪ ತಳವಾರ ಎಂಬಾತನನ್ನು ಬಂಧಿಸಿದ್ದಾರೆ.










