ವಿಜಯಪುರ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಪರ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ಕೊಟ್ಟಿವೆ. ಈ ಹಿನ್ನಲೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಇಂದು ನಡೆಯಬೇಕಿದ್ದ ಸ್ನಾತಕ/ಸ್ನಾತಕೋತ್ತರ ಹಾಗೂ ಬಿಎಡ್ ಕೋರ್ಸ್ ಗಳ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
ಭಾರತ್ ಬಂದ್ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ತೊಂದರೆಯಾಗಬಾರದು ಎನ್ನುವ ದೃಷ್ಟಿಯಿಂದ ಇಂದು ನಡೆಯಬೇಕಾಗಿದ್ದ ಎಲ್ಲಾ ಪರೀಕ್ಷೆಗಳನ್ನು ವಿವಿ ಮುಂದೂಡಿದೆ. ಬಿಎಡ್ ವಿದ್ಯಾರ್ಥಿಗಳಿಗೆ ಇಂದು ನಡೆಯಬೇಕಿದ್ದ ಪರೀಕ್ಷೆ ನಾಳೆ ನಡೆಸಲು ನಿರ್ಧಾರ ಮಾಡಲಾಗಿದೆ. ಸ್ನಾತಕ/ಸ್ನಾತಕೋತ್ತರ ವಿದ್ಯಾರ್ಥಿಗಳ ಮುಂದೂಡಿಕೆಯಾದ ಪರೀಕ್ಷೆಯ ದಿನಾಂಕ ನಂತರ ತಿಳಿಸಲಾಗುವುದು ಎಂದು ವಿವಿ ತಿಳಿಸಿದೆ.










