ಸಿಂಧಗಿ, ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ…

75
firstsuddi

ಬೆಂಗಳೂರು : ಸಿಂಧಗಿ, ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2ಕ್ಕೆ ಮತ ಎಣಿಕೆ ನಡೆಯಲಿದೆ.

ಹಾನಗಲ್ ನಲ್ಲಿ ಸಿಎಂ ಉದಾಸಿ ಮತ್ತು ಸಿಂದಗಿ ಕ್ಷೇತ್ರದಲ್ಲಿ ಎಂಸಿ ಮನಗೂಳಿ ಅವರ ನಿಧನದಿಂದಾಗಿ ಈ ಕ್ಷೇತ್ರಗಳು ತೆರವಾಗಿದ್ದವು. ಅಕ್ಟೋಬರ್ 1ರಂದು ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 8 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಲಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 13 ಕೊನೆಯ ದಿನವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.