ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ಅಪರಿಚಿತ ವೃದ್ಧ ಸಾವು…

89
firstsuddi

ಕೊಟ್ಟಿಗೆಹಾರ : ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಇಂದು ಅಪರಿಚಿತ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ಇಂದು ಬಸ್ ನಿಲ್ದಾಣದಲ್ಲಿ ಬಿಕ್ಷೆ ಬೇಡುತ್ತಿದ್ದ ವೃದ್ಧರೊಬ್ಬರು ಮದ್ಯಾಹ್ನದ ವೇಳೆಗೆ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದಿದ್ದು ಸ್ಥಳಿಯರು ಗಮನಿಸಿ 112 ಗೆ ಹಾಗೂ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೋಲಿಸರು ಹಾಗೂ ವಿಪತ್ತು ನಿರ್ವಹಣಾ ಬಣಕಲ್ ಘಟಕದ ಸದಸ್ಯರು ಬೇಟಿ ನೀಡಿದರು. ಈ ಬಗ್ಗೆ ಬಣಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.