ಮುಂಬೈ: ಐಷಾರಾಮಿ ಹಡಗಿನಲ್ಲಿ ಶನಿವಾರ ರಾತ್ರಿ ಡ್ರಗ್ಸ್ ಪಾರ್ಟಿ ಮಾಡ್ತಿದ್ದ ಆರೋಪದಡಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ) ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಒಳಗೊಂಡು 3 ಮಂದಿಯನ್ನು ಬಂಧಿಸಿದೆ. ನಿನ್ನೆ ಸಂಜೆಯೇ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಆತನನ್ನ ನಿನ್ನೆ ಎನ್ಸಿಬಿ ಕೋರ್ಟ್ ಒಂದು ದಿನದ ಮಟ್ಟಿಗೆ ಎನ್ಸಿಬಿ ಕಸ್ಟಡಿಗೆ ಒಪ್ಪಿಸಿದೆ. ಆರ್ಯನ್ ಖಾನ್ ಇವತ್ತು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದು, ಅವರಿಗೆ ಜಾಮೀನು ಸಿಗಲಿದೆಯೋ ಅಥವಾ ನ್ಯಾಯಾಂಗ ಬಂಧನಕ್ಕೆ ಒಳಪಡುವ ಸಾಧ್ಯತೆ ಇದೆಯೋ ಎಂಬ ಬಗ್ಗೆ ಕೌತುಕ ಮನೆ ಮಾಡಿದೆ.
ದಾಳಿ ವೇಳೆ 13 ಗ್ರಾಂ ಕೊಕೇನ್, 21 ಗ್ರಾಂ ಚರಸ್, 21 ಎನ್ಡಿಎಂಎ ಮಾತ್ರೆ ಮತ್ತು 1.33 ಲಕ್ಷ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ ದ್ರವ್ಯ ಹೊಂದಿರುವ, ಮಾದಕ ದ್ರವ್ಯ ಖರೀದಿ, ಸಾಗಾಟ ಆರೋಪದಡಿ ಶಾರೂಖ್ ಪುತ್ರನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.










