ರಾಹುಲ್ ಗಾಂಧಿ ಲಂಖಿಂಪುರ ಭೇಟಿಗೆ ಅವಕಾಶ ನೀಡಲು ನಿರಾಕರಿಸಿದ ಉತ್ತರ ಪ್ರದೇಶ ಸರ್ಕಾರ…

69
firstsuddi

ಲಕ್ನೋ : ಉತ್ತರಪ್ರದೇಶದ ಲಖಿಂಪುರಕ್ಕೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಲು ನಿರ್ಧರಿಸಿತ್ತು. ಆದರೆ ಇದೀಗ ಉತ್ತರ ಪ್ರದೇಶ ಸರ್ಕಾರ ಭೇಟಿಗೆ ಅವಕಾಶವಿಲ್ಲ ಎಂದಿದೆ.

ಕಳೆದ ಭಾನುವಾರ 8 ಮಂದಿ ಸಾವಿಗೀಡಾದ ಸಂಬಂಧ ಉತ್ತರ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 144 ಸೆಕ್ಷನ್ ಜಾರಿ ಮಾಡಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದ ಕಾಂಗ್ರೆಸ್, ರಾಹುಲ್ ಗಾಂಧಿ ನೇತೃತ್ವದ ಐವರು ಸದಸ್ಯರ ನಿಯೋಗ ಲಖಿಂಪುರ ಜಿಲ್ಲೆಗೆ ಭೇಟಿ ನೀಡಲು ನಿರ್ಧರಿಸಿದ್ದು ಅನುಮತಿ ಕೋರಿತ್ತು. ಆದರೆ ಯೋಗಿ ಸರ್ಕಾರ ಅನುಮತಿ ನಿರಾಕರಿಸಿದೆ.