ದತ್ತಪೀಠಕ್ಕೆ ಅರ್ಚಕರ ನೇಮಕ: ಹಿಂದೂಗಳ ಭಾವನೆಗೆ ಧಕ್ಕೆ ಬಾರದಂತೆ ನಿರ್ಣಯ –ಸುನೀಲ್ ಕುಮಾರ್.

91
firstsuddi

ಉಡುಪಿ : ದತ್ತಪೀಠಕ್ಕೆ ಅರ್ಚಕರ ನೇಮಕ ವಿಚಾರದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಬಾರದಂತೆ ನಿರ್ಣಯ ಕೈಗೊಳ್ಳುತ್ತದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದರು.

ಅವರು ಇಂದು ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ದತ್ತಪೀಠ ವಿಚಾರದಲ್ಲಿ ನಮ್ಮ ನಿಲುವು ಬಹಳ ಸ್ಪಷ್ಟವಿದೆ. ದಶಕಗಳ ಹೋರಾಟದ ಫಲ ನ್ಯಾಯ ಸಿಕ್ಕಿದ್ದು, ನ್ಯಾಯಾಲಯದ ತೀರ್ಪು ಅಭ್ಯಾಸ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಕಾನೂನು ,ಕಂದಾಯ ಮುಜರಾಯಿ ಸಚಿವರನ್ನು ಒಳಗೊಂಡ ಸಮಿತಿ ರಚನೆ ಮಾಡಲಿದ್ದು ಈ ನಿಟ್ಟಿನಲ್ಲಿ ಶೀಘ್ರ ಈ ಕುರಿತು ಸುತ್ತೋಲೆ ಹೊರಡಿಸುತ್ತೇವೆ. ದತ್ತಪೀಠ ವಿಚಾರದಲ್ಲಿ ವಿಳಂಬ ಮಾಡುವ ಯಾವುದೇ ಉದ್ದೇಶ ನಮಗಿಲ್ಲವಾಗಿದ್ದು ದತ್ತಪೀಠದ ಕುರಿತು ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ನವರಾತ್ರಿ ಆಚರಣೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್ ಅವರು, ಭಕ್ತಿ ಪ್ರಧಾನ ಆಚರಣೆಗೆ ಸರ್ಕಾರ ಅವಕಾಶ ಕೊಡುತ್ತದೆ. ಕೇಂದ್ರ ರಾಜ್ಯ ಸರ್ಕಾರ ಸುತ್ತೋಲೆ ಪರಿಶೀಲಿಸುತ್ತೇವೆ. ಮೈಸೂರಿನಲ್ಲಿ ಜಂಬೂಸವಾರಿಗೆ 500 ಮಂದಿ ನಿಗದಿಪಡಿಸಿದ್ದು, ಇತಿಮಿತಿ ಅರ್ಥ ಮಾಡಿಕೊಂಡು ಉಳಿದ ಕಡೆಗಳಲ್ಲಿ ಆಚರಣೆ ಮಾಡಲಾಗುವುದು ಎಂದರು.