ತಂದೆಯೇ ಮಗನ ಮೇಲೆ ಗುಂಡು ಹಾರಿಸಿದ ಪ್ರಕರಣ ; ಚಿಕಿತ್ಸೆ ಫಲಿಸದೇ ಬಾಲಕ ಸಾವು…

77
firstsuddi

ಮಂಗಳೂರು : ತಂದೆಯಿಂದಲೇ ಗುಂಡಿನ ದಾಳಿಗೆ ಒಳಗಾಗಿದ್ದ ಮಗ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾನೆ.

ಸುಧೀಂದ್ರ (16) ಮೃತ ಬಾಲಕ. ಅಕ್ಟೋಬರ್ 5ರಂದು ಮಂಗಳೂರಿನ ಮಾರ್ಗನ್ ಗೇಟ್ ಬಳಿ ವೈಷ್ಣವಿ ಕಾರ್ಗೋ ಪ್ರೈ ಲಿಮಿಟೆಡ್ ನ ಮಾಲೀಕ ರಾಜೇಶ್ ಪ್ರಭು ಜೊತೆ ವೇತನ ವಿಚಾರಕ್ಕೆ ಚಂದ್ರು ಮತ್ತು ಅಶ್ರಫ್ ಎಂಬ ಸಿಬ್ಬಂದಿ ರಾಜೇಶ್ ಜೊತೆ ಗಲಾಟೆ ಮಾಡಿದ್ದರು. ಈ ವೇಳೆ ರಾಜೇಶ್ ಪುತ್ರ ಸುಧೀಂದ್ರ ಪ್ರಭು ಸಿಬ್ಬಂದಿ ಜೊತೆ ಜಗಳಕ್ಕೆ ಇಳಿಯುತ್ತಾನೆ. ಆಗ ರಾಜೇಶ್ ಪ್ರಭು ತನ್ನ ಕಿಸೆಯಲ್ಲಿದ್ದ ಪಿಸ್ತೂಲ್ ತೆಗೆದು ಎರಡು ಸುತ್ತು ಫೈರಿಂಗ್ ಮಾಡಿದ್ದರು. ಆಗ ಒಂದು ಬುಲೆಟ್ ಸುಧೀಂದ್ರನ ತಲೆಗೆ ತಗುಲಿತ್ತು. ಪರಿಣಾಮ ಗಂಭೀರ ಗಾಯಗೊಂಡ ಸುಧೀಂದ್ರನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆತನ ಮೆದುಳು ನಿಷ್ಕ್ರಿಯವಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಇನ್ನೂ ವೈಷ್ಣವಿ ಖಾರ್ಗೋ ಲಿಮಿಟೆಡ್ ಕಂಪನಿ ಮಾಲೀಕ ರಾಜೇಶ್ ಪ್ರಭುನನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ.