ನಾಳೆಯಿಂದ ಅ.10ರವರೆಗೆ ಎಂ.ಜಿ.ರಸ್ತೆ – ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸಂಚಾರ ಸ್ಥಗಿತ…

69
firstsuddi

ಬೆಂಗಳೂರು : ಅಕ್ಟೋಬರ್ 9 (ನಾಳೆ)ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 10 (ಭಾನುವಾರ)ರ ಬೆಳಗ್ಗೆ 6 ಗಂಟೆ ತನಕ ಎಂ.ಜಿ.ರಸ್ತೆ-ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ಸ್ಥಗಿತವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಇಂದು ಪ್ರಕಟಣೆ ಹೊರಡಿಸಿದೆ.

ನಾಳೆಯಿಂದ ನೇರಳೆ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ಮೆಟ್ರೋ ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ಇರುವುದಿಲ್ಲ. ಕಾಮಗಾರಿ ಪೂರ್ಣಗೊಂಡ ಬಳಿಕ ಅಕ್ಟೋಬರ್ 10ರ ಭಾನುವಾರ ಬೆಳಗ್ಗೆ 6 ಗಂಟೆ ಬಳಿಕ ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ. ಹಸಿರು ಮಾರ್ಗದಲ್ಲಿನ ರೈಲು ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್​ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.