ದೇಶದಲ್ಲಿ 19,740 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,39,35,309ಕ್ಕೆ ಏರಿಕೆ…

68
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 19,740 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,39,35,309ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 248 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,50,375ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,39,35,309 ಮಂದಿ ಸೋಂಕಿತರ ಪೈಕಿ ಈವರೆಗೆ 3,32,48,291 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.