ಮತ್ತೆ ಸರ್ವರ್ ಡೌನ್ – ಬಳಕೆದಾರರಲ್ಲಿ ಕ್ಷಮೆಯಾಚಿಸಿದ ಫೇಸ್ ಬುಕ್…

65
firstsuddi

ವಾಷಿಂಗ್ಟನ್ : ಮಾರ್ಕ್ ಜುಕರ್ ಬರ್ಗ್ ಒಡೆತನದ ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಮ್ ತಾತ್ಕಾಲಿಕವಾಗಿ ಸ್ಥಗಿತಗೊಂಡ ಕಾರಣದಿಂದ ಫೇಸ್ ಬುಕ್ ಕ್ಷಮೆಯಾಚಿಸಿದೆ.

ನಿನ್ನೆ ಎರಡು ಗಂಟೆಗಳ ಕಾಲ ಸೇವೆಗಳು ಸ್ಥಗಿತವಾದ ಕಾರಣದಿಂದ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಎಲ್ಲವನ್ನು ಸರಿಪಡಿಸಲಾಗಿದೆ ಮತ್ತು ಈಗ ಎಲ್ಲವೂ ಸಹಜ ಸ್ಥಿತಿಗೆ ಮರಳಿದೆ. ನಮ್ಮೊಂದಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಟ್ವೀಟ್ ಮಾಡುವ ಮೂಲಕ ಫೇಸ್ ಬುಕ್ ಹೇಳಿಕೊಂಡಿದೆ.

ಸೋಮವಾರ ಭಾರತೀಯ ಕಾಲಮಾನ ರಾತ್ರಿ 9 ಗಂಟೆಯ ಬಳಿಕ ವಾಟ್ಸಪ್, ಇನ್ ಸ್ಟಾಗ್ರಾಮ್ ಮತ್ತು ಫೇಸ್ ಬುಕ್ ಸೇವೆಗಳಲ್ಲಿ ವ್ಯತ್ಯಯ ಕಂಡು ಬಂದಿತ್ತು. ಇದರಿಂದಾಗಿ ವಾಟ್ಸಪ್‍ನಿಂದ ಯಾವುದೇ ಮೆಸೇಜ್ ಸೆಂಡ್ ಆಗುತ್ತಿಲ್ಲ ಜೊತೆಗೆ ಬೇರೆಯವರು ಕಳಿಸಿದ ಮೆಸೇಜ್ ಕೂಡಾ ರಿಸೀವ್ ಆಗುತ್ತಿಲ್ಲ. ಇನ್ ಸ್ಟಾಗ್ರಾಂನಲ್ಲಿ couldn’t refresh the feed ಎಂಬ ಸಂದೇಶ ಬಳಕೆದಾರರಿಗೆ ಕಾಣಿಸುತ್ತಿತ್ತು. ಫೇಸ್ ಬುಕ್ ಪೇಜ್ ಲೋಡ್ ಆಗುತ್ತಿರಲಿಲ್ಲ.

ಫೇಸ್ ಬುಕ್ ಸಂಸ್ಥೆ ತನ್ನ Twitter ಖಾತೆಯ ಮೂಲಕ ಸೇವೆ ವ್ಯತ್ಯಯವಾಗಿದ್ದನ್ನು ಖಚಿತಪಡಿಸಿತು. ಅಲ್ಲದೇ ಬಳಕೆದಾರರಲ್ಲಿ ಕ್ಷಮೆ ಯಾಚಿಸಿತು.