ಯುವಕನ ಮೇಲೆಯೇ ಅತ್ಯಾಚಾರವೆಸಗಿದ ಯುವಕ!

90
firstsuddi

ಬೆಳಗಾವಿ : ಯುವಕನ ಮೇಲೆಯೇ ಯುವಕನೋರ್ವ ಅತ್ಯಾಚಾರ ಎಸಗಿರುವ ವಿಚಿತ್ರ ಘಟನೆ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಥಣಿಯ ಹೋಟೆಲ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಕೆಲಸ ಮುಗಿಸಿ ಮನೆಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ. ಈ ವೇಳೆ ಬೈಕ್ ಮೇಲೆ ಬಂದ ಆರೋಪಿ ಡ್ರಾಪ್ ಕೊಡುವುದಾಗಿ ಹೇಳಿ ಗಾಡಿ ಮೇಲೆ ಹತ್ತಿಸಿಕೊಂಡಿದ್ದಾನೆ. ಮಾರ್ಗ ಮಧ್ಯೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದು, ವಿಚಾರ ಯಾರಿಗೂ ಹೇಳಬಾರದೆಂದು ಜೀವ ಬೆದರಿಕೆ ಹಾಕಿದ್ದಾನೆ.

ಸಂತ್ರಸ್ತ ಯುವಕ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಅತ್ಯಾಚಾರಿ ಆರೋಪಿ ರಾಜು ನೀಲವ್ವ ಆಚಾರಟ್ಟಿ ವಿಕೃತ ಯುವಕನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.