55 ವರ್ಷದ ಮಹಿಳೆ ಮೇಲೆ ನಾಲ್ವರು ಕಾಮುಕರಿಂದ ಅತ್ಯಾಚಾರ…

75
firstsuddi

ಉತ್ತರಪ್ರದೇಶ : 55 ವರ್ಷದ ಮಹಿಳೆಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಿನ್ನೆ ನಡೆದಿದೆ.

 ಮಹಿಳೆ ಕಾಡಿಗೆ ಮೇವು ತರಲು ಹೋದಾಗ ನಾಲ್ವರು ಯುವಕರ ತಂಡ ಆಕೆಯ ಮೇಲೆ ಅತ್ಯಾಚಾರವೆಸಗಿದೆ. ನಂತರ ಅಲ್ಲಿಂದ ತಪ್ಪಿಸಿಕೊಂಡು ಮಹಿಳೆ ಕೂಡಲೇ ತನ್ನ ಮನೆಗೆ ಆಗಮಿಸಿ ನಡೆದ ಘಟನೆಯನ್ನು ವಿವರಿಸಿದ್ದಾರೆ. ಬಳಿಕ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿ, ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಪಿ ವೃಂದಾ ಶುಕ್ಲಾ ಅವರು, ಬೆಳಗ್ಗೆ 10 ಗಂಟೆ ಸುಮಾರಿಗೆ ಮಹಿಳೆ ಹುಲ್ಲು ಕತ್ತರಿಸುತ್ತಿದ್ದ ವೇಳೆ ಆಕೆಯನ್ನು ಸಮೀಪದ ಅರಣ್ಯ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಮಹಿಳೆ ಆರೋಪಿಯೊಬ್ಬನ ಗುರುತನ್ನು ಪತ್ತೆ ಹಚ್ಚಿದ್ದು, ಆತ ತಮ್ಮ ಗ್ರಾಮದವನೇ ಆಗಿದ್ದಾನೆ ಮತ್ತು ಅಲ್ಲಿಯೇ ದನ ಮೇಯಿಸುತ್ತಿದ್ದ ಎಂದು ತಿಳಿಸಿದ್ದಾರೆ. ಇದೀಗ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ ಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದಿದ್ದಾರೆ.