ವಂಚನೆ ಆರೋಪ – ಮಾಜಿ ಶಾಸಕ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್ಐಆರ್ ದಾಖಲು…

73
firstsuddi

ಬೆಂಗಳೂರು : ವಂಚನೆ ಆರೋಪದಡಿ ಮಾಜಿ ಬಿಜೆಪಿ ಶಾಸಕ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್ಐಆರ್ ದಾಖಲಾಗಿದೆ.

2004ರಲ್ಲಿ ಶಾಸಕರಾಗಿದ್ದ ಸಂದರ್ಭದಲ್ಲಿ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಇಂಡ್ ಸಿಂಡ್ ಎಂಬ ಕಂಪನಿಯಿಂದ ಸೈಟ್ ಕೊಡಿಸುವುದಾಗಿ 2.85 ಕೋಟಿ ಹಣ ಪಡೆದಿದ್ದರು. ನಗದು ಹಾಗೂ ಚೆಕ್ ಮೂಲಕ 2.85 ಕೋಟಿ ಹಣ ಪಡೆದಿದ್ದರು. ಈ ಬಗ್ಗೆ ಹಲವು ಬಾರಿ ವಿಚಾರಿಸಿದರೂ ಅವರು ಸರಿಯಾಗಿ ಪ್ರತಿಕ್ರಿಯಿಸಿರಲಿಲ್ಲ ಎಂದು ದೂರಲಾಗಿದೆ.

ಇಂಡ್ ಸಿಂಡ್ ಡೆಲವಪರ್ಸ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು ಸೈಟ್ ಮತ್ತು ಫ್ಲಾಟ್ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆಂದು ಆರೋಪಿಸಿ ಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣವನ್ನು ವಿಚಾರಣೆ ನಡೆಸಿದ್ದ 4ನೇ ಎಸಿಎಂಎಂ ಕೋರ್ಟ್ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಇದೀಗ ನಗರದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ವಂಚನೆ ಆರೋಪದಡಿ ಎಫ್ಐಆರ್ ದಾಖಲಾಗಿದೆ.