ನಡುರಸ್ತೆಯಲ್ಲೇ ಅಪ್ರಾಪ್ತೆಯನ್ನ ಕೊಂದ ಪ್ರಿಯಕರ…

91
firstsuddi

ಪುಣೆ : ನಡು ರಸ್ತೆಯಲ್ಲಿಯೇ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರಿಯಕರ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಪುಣೆಯ ಬಿಬ್ವೆವಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಈ ಸಂಭಂದ 22 ವರ್ಷದ ರಿಷಿಕೇಶ್ ಭಾಗ್ವತ್ ನನ್ನು ಬಂಧಿಸಲಾಗಿದೆ. ಮೃತ ಬಾಲಕಿ ತನ್ನ ಸ್ನೇಹಿತರೊಂದಿಗೆ ಬರುತ್ತಿದ್ದ ವೇಳೆ ರಿಷಿಕೇಶ್ ಭಾಗ್ವತ್ ಎಂಬಾತ ಆಕೆಯನ್ನು ರಸ್ತೆ ಮಧ್ಯೆ ತಡೆದು ಮಾತನಾಡಿದ್ದಾನೆ. ಈ ವೇಳೆ ಆಕೆಯೊಂದಿಗೆ ಇದ್ದ ಸ್ನೇಹಿತೆಯರನ್ನು ಬೆದರಿಸಿ ಓಡಿಸಿದ್ದಾನೆ. ಬಳಿಕ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಆಕೆಯ ಮೇಲೆ ರಿಷಿಕೇಶ್ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪರಿಣಾಮ ಬಾಲಕಿ ರಸ್ತೆಯಲ್ಲೇ ಸಾವನ್ನಪ್ಪಿದ್ದಾಳೆ.

ರಿಷಿಕೇಶ್ ಬಾಲಕಿಯನ್ನು ಪ್ರೀತಿಸುತ್ತಿದ್ದ. ಆದರೆ ಬಾಲಕಿ ಆತನನ್ನು ಪ್ರೀತಿಸುತ್ತಿರಲಿಲ್ಲ. ಸಾಕಷ್ಟು ಬಾರಿ ಆಕೆಯನ್ನು ಒತ್ತಾಯಿಸುತ್ತಿದ್ದ. ಆದರೆ ಆಕೆ ಮಾತ್ರ ಒಪ್ಪಿರಲಿಲ್ಲ. ಎಂದು ಬಾಲಕಿ ಕುಟುಂಬಸ್ಥರು ಹೇಳಿದ್ದಾರೆ.

ಸದ್ಯ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆತನೊಂದಿಗೆ ಇದ್ದ ಸ್ನೇಹಿತರನ್ನು ವಶಕ್ಕೆ ಪಡೆಯುತ್ತೇವೆ ಎಂದು ಪುಣೆಯ ಡಿಸಿಪಿ ನಮ್ರತಾ ಪಾಟೀಲ್ ಹೇಳಿದ್ದಾರೆ.