ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆಯನ್ನ ಅಪಹರಿಸಿ ಅತ್ಯಾಚಾರವೆಸಗಿದ ಆರೋಪ – ವ್ಯಕ್ತಿ ಬಂಧನ…

68
firstsuddi

ವಿಜಯಪುರ : ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆಯನ್ನ ಅಪಹರಿಸಿ ಅತ್ಯಾಚಾರವೆಸಗಿದ ಆರೋಪ ಕೇಳಿಬಂದ ಹಿನ್ನಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಶಿವಯ್ಯ ಜಂಬಯ್ಯ ರುದ್ರಸ್ವಾಮಿಮಠ (32) ಬಂಧಿತ ವ್ಯಕ್ತಿ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಂಗಳವಾರ ಬೆಳಗ್ಗೆ ಸಂಗಡಿಗರ ಸಹಾಯದಿಂದ ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದು ನಂತರ ಆಕೆಯ ಮೈಮೇಲಿದ್ದ ಚಿನ್ನಾಭರಣ ದೋಚಿದ್ದಾನೆ. ಇತ್ತ ಬಾಲಕಿಗಾಗಿ ಪೋಷಕರು ಹುಡುಕಾಡಿದ್ದು ತಡವಾಗಿ ಮನೆಗೆ ಬಂದ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಸದ್ಯ ಮದ್ದೇಬಿಹಾಳ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು ಆರೋಪಿ ರುದ್ರಯ್ಯನನ್ನು ಪೊಲೀಸರು ಬಂಧಿಸಿದ್ದು, ಇತರರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.