‘ಕೋಟಿಗೊಬ್ಬ 3’ ಬಿಡುಗಡೆಯಾಗದ ಹಿನ್ನಲೆ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ ಕಿಚ್ಚ.

73
firstsuddi

ಬೆಂಗಳೂರು : ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಕೋಟಿಗೊಬ್ಬ 3’ ಬಿಡುಗಡೆಯಾಗದ ಹಿನ್ನಲೆ ನಟ ತನ್ನ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ.

ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಸುದೀಪ್ ಅವರು, ಕೆಲವೊಂದು ವಿಚಾರಗಳಿಂದ ಸಿನಿಮಾದ ಮೊದಲ ಶೋ ವಿಳಂಬವಾಗಿದೆ. ನಾನು ವೈಯಕ್ತಿವಾಗಿ ಎಲ್ಲರ ಬಳಿ ಕ್ಷಮೆಯಾಚಿಸುತ್ತೇನೆ. ಅಭಿಮಾನಿಗಳು ಕೆಟ್ಟ ರೀತಿಯಲ್ಲಿ ವರ್ತಿಸಬಾರದು. ಚಿತ್ರಮಂದಿರಗಳಿಗೆ ಹಾನಿ ಮಾಡಬೇಡಿ. ಕೆಲ ಸಮಸ್ಯೆಗಳಿಂದ ರಿಲೀಸ್ ವಿಳಂಬವಾಗಿದೆ. ಚಿತ್ರ ಬಿಡುಗಡೆಗೆ ನಾನು ಕೂಡ ಉತ್ಸುಕನಾಗಿರುವೆ. ಅಭಿಮಾನಿಗಳು ಶಾಂತಿಯಿಂದ ಇರಿ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ಇಂದು ‘ಕೋಟಿಗೊಬ್ಬ 3’ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ಚಿತ್ರ ಬಿಡುಗಡೆಯಾಗುತ್ತಿಲ್ಲ. ತಮ್ಮ ನೆಚ್ಚಿನ ನಟನ ಸಿನಿಮಾ ನೋಡಲು ಕಾದು ಕುಳಿತಿದ್ದ ಅಭಿಮಾನಿಗಳಲ್ಲಿ ನಿರಾಸೆ ಮೂಡಿದೆ.