ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದ ನ್ಯಾಯಾಲಯ – ಆರ್ಯನ್ ಖಾನ್ ಗೆ ಇಲ್ಲ ಜಾಮೀನು ಭಾಗ್ಯ…

75
firstsuddi

ಮುಂಬೈ : ಸಮುದ್ರದಲ್ಲಿ ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಸಿದ ಆರೋಪದಲ್ಲಿ ಎನ್ಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ಆರ್ಯನ್ ಖಾನ್ ಮತ್ತು ಇತರೆ ಆರೋಪಿಗಳು ಜಾಮೀನು ಕೋರಿ ಮುಂಬೈ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ವಾದ ಮತ್ತು ಪ್ರತಿವಾದ ಆಲಿಸಿದ ನ್ಯಾಯಾಲಯವು ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿದೆ.

ಆರ್ಯನ್ ಜಾಮೀನು ಅರ್ಜಿಗೆ ಎನ್‌ಸಿಬಿ ಆಕ್ಷೇಪ ವ್ಯಕ್ತಪಡಿಸಿತು. ಆರ್ಯನ್ ವಿರುದ್ಧ ಬಹಳಷ್ಟು ಸಾಕ್ಷ್ಯಗಳು ಇವೆ. ಕ್ರೂಸ್‌ನಲ್ಲಿ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡಿದ್ದಾರೆ. ಆರ್ಯನ್‌ಗೆ ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್ಗಳ ಜತೆ ನಂಟಿದೆ. ಆರ್ಯನ್ ನಿರಂತರವಾಗಿ ಡ್ರಗ್ಸ್ ಸೇವಿಸುವುದು ವಾಟ್ಸಾಪ್ ಚಾಟಿಂಗ್ನಿಂದ ಬಯಲಾಗಿದೆ. ಆರ್ಯನ್ಗೆ ಜಾಮೀನು ನೀಡಿದ್ರೆ ಸಾಕ್ಷ್ಯ ತಿರುಚುವ ಸಾಧ್ಯತೆ ಇರುತ್ತದೆ ಎಂದು ಎನ್‌ಸಿಬಿ ಪರ ಎಎಸ್‌ಜಿ ಅನಿಲ್ ಸಿಂಗ್ ವಾದ ಮಂಡನೆ ಮಾಡಿದರು.

ಇಂದು ಈ ಬಗ್ಗೆ ವಿಚಾರಣೆ ನಡೆಸಿದ ಇಲ್ಲಿನ ಎನ್ಡಿಪಿಎಸ್ ನ್ಯಾಯಾಲಯ ಜಾಮೀನು ನೀಡಿದರೆ ಪ್ರಕರಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಎಂದು ಅಭಿಪ್ರಾಯಪಟ್ಟಿದೆ. ಹಾಗಾಗಿ ಪ್ರಕರಣ ಜಾಮೀನು ಅರ್ಜಿಯ ವಿಚಾರಣೆಯನ್ನು ಅ.20ಕ್ಕೆ ಮುಂದೂಡಲಾಗುವುದು ಎಂದು ಹೇಳಿದೆ. ಇದರಿಂದ ಆರ್ಯನ್ ಖಾನ್ ಒಂದು ವಾರ ಮತ್ತೆ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ.