ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,862 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,40,37,592ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 379 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,51,814ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,40,37,592 ಮಂದಿ ಸೋಂಕಿತರ ಪೈಕಿ ಈವರೆಗೆ 3,33,82,100 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










