ಮೈಸೂರು : ಮೈಸೂರು ದಸರಾ ವಿದ್ಯುತ್ ದೀಪಾಲಂಕಾರ ಮುಂದಿನ ಒಂಬತ್ತು ದಿನಗಳ ಕಾಲ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಅಧಿಕೃತ ಘೋಷಣೆ ಮಾಡಿದ್ದಾರೆ.
ಇಂದು ನಗರದ ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಹಿನ್ನೆಲೆಯಲ್ಲಿ ಅರಮನೆಗೆ ವಿಶೇಷ ದೀಪಾಲಂಕಾರ ಮಾಡಲಾಗಿದೆ. ಇದನ್ನ ನೋಡಲು ಸಾವಿರಾರು ಜನ ಬರುತ್ತಾರೆ. ಮತ್ತು ದಸರಾ ದೀಪಾಲಂಕಾರ ಮುಂದುವರಿಸಲು ಜನರ ಬೇಡಿಕೆ ಇದೆ. ಹೀಗಾಗಿ ಇಂದಿನಿಂದ ಒಂಬತ್ತು ದಿನ ವಿದ್ಯುತ್ ದೀಪಾಲಂಕಾರವನ್ನು ವಿಸ್ತರಿಸುತ್ತಿರುವುದಾಗಿ ತಿಳಿಸಿದರು.










