ಮಂಗಳೂರು : ದಸರಾ ಪಾರ್ಟಿ ಮಾಡುವ ವೇಳೆ ಗೆಳೆಯರೊಂದಿಗೆ ಗಲಾಟೆ ನಡೆದಿದ್ದು, ಓರ್ವನಿಗೆ ಚೂರಿ ಇರಿದು ಕೊಲೆ ಮಾಡಿರುವ ಘಟನೆ ನಗರದ ಪಂಪವೆಲ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ (20) ಎಂದು ಗುರುತಿಸಲಾಗಿದೆ. ನಿನ್ನೆ ಪಂಪವೆಲ್ ಬಳಿಯ ಸಾಯಿ ಪ್ಯಾಲೇಸ್ ಎಂಬ ಲಾಡ್ಜ್ ನಲ್ಲಿ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್ ಹಾಗೂ ಪ್ರಜ್ವಲ್ ಎಂಬವರು ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುತ್ತಿದ್ದರು. ರಾತ್ರಿ ಸುಮಾರು 2 ಗಂಟೆಗೆ ಜೇಸನ್ ಸುರತ್ಕಲ್ ಮತ್ತು ಧನುಷ್ ಮಧ್ಯೆ ಜಗಳವಾಗಿದ್ದು, ಈ ವೇಳೆ ಜೇಸನ್ ಸುರತ್ಕಲ್ ಎಂಬಾತ ಹರಿತವಾದ ಆಯುಧದಿಂದ ಧನುಷ್ ಗೆ ಚುಚ್ಚಿದ್ದು, ತೀವ್ರವಾಗಿ ಗಾಯಗೊಂಡಿದ್ದಾನೆ. ನಂತರ ಧನುಷ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿರುವದು ದೃಡಪಟ್ಟಿದೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










