ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ – ಪೊಲೀಸ್ ಕಾನ್ಸ್ ಟೇಬಲ್ ದುರ್ಮರಣ…

102
firstsuddi

ಬಂಟ್ವಾಳ : ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅವರು ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆಯಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ.

ವೇಣೂರಿನ ಮರೊಳಿ ನಿವಾಸಿ ಅಬೂಬಕ್ಕರ್ (47) ಮೃತರು ಎಂದು ಗುರುತಿಸಲಾಗಿದೆ. ವಾಮದಪದವಿನಲ್ಲಿ ನಡೆದ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಭಾಗವಹಿಸಿ ಅಬೂಬಕ್ಕರ್ ಅವರು ತನ್ನ ಬೈಕಿನಲ್ಲಿ ವಾಪಸಾಗುತ್ತಿದ್ದರು. ಈ ವೇಳೆ ನೇರಳಕಟ್ಟೆ ಬಳಿ ಎದುರಿನಿಂದ ಬಂದ ಇನ್ನೊಂದು ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಈ ಸಂದರ್ಭ ಹಿಂದಿನಿಂದ ಜೀಪಿನಲ್ಲಿ ಬರುತ್ತಿದ್ದ ಪೊಲೀಸ್ ಸಿಬ್ಬಂದಿ ಗಾಯಳುಗಳನ್ನು ತಕ್ಷಣ ಜೀಪಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದು ,ದುರಾದೃಷ್ಟವಶಾತ್ ಅಬೂಬಕ್ಕರ್ ಅವರು ದಾರಿ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಇನ್ನೊಂದು ಬೈಕಿನ ಸವಾರ ಇರ್ವತ್ತೂರು ನಿವಾಸಿ ದುರ್ಗಾಪ್ರಸಾದ್ ಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.